ಕಿನ್ನಿಗೋಳಿ:ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಥಾನದ ದೇವರ ಗುಂಡಿ ಸಂಕದ ಕೆರೆ ಬಳಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಅಳವಡಿಸಿದ್ದಾರೆ.
ಕಳೆದ ದಿನದ ಹಿಂದೆ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ಕೃಷಿಕ ಎಳತ್ತೂರು ಕಲ್ಕರೆ ನಿವಾಸಿ ಲಿಗೋರಿ ಪಿರೇರಾ (58) ಎಂಬವರ ಮೇಲೆ ದಾಳಿ ನಡೆಸಿದ್ದು ಈ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಮೂಡಬಿದ್ರೆ ವಲಯದ ಅರಣ್ಯ ಇಲಾಖೆ ಅಧಿಕಾರಿ ನಾಗೇಶ್ ಬಿಲ್ಲವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿರತೆ ಸೆರೆಗೆ ಬೋನ್ ಅಳವಡಿಸಿದ್ದಾರೆ .
ಈ ನಡುವೆ ಚಿರತೆ ದಾಳಿಯಿಂದ ಗಾಯಗೊಂಡ ಕೃಷಿಕ ಲಿಗೋರಿ ಪಿರೇರಾ (58) ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.ಈ ಭಾಗದಲ್ಲಿ ಚಿರತೆ ಕಾಟ ವಿಪರೀತವಾಗಿದ್ದು, ಚಿರತೆ ದಾಳಿಯ ಘಟನೆಯಿಂದ ಸ್ಥಳೀಯ ಕೃಷಿಕರು ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿರುವ ವಾಹನ ಸವಾರರು ಪ್ರಯಾಣಿಕರು ರಾತ್ರಿ ಹೊತ್ತು ಸಂಚರಿಸಲು ಭಯಪಡುವಂತಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಎಳತ್ತೂರು ಹೇಳಿದ್ದಾರೆ
Publisher: eSamudaay