ಬೆಂಗಳೂರು : ವೆಂಬರ್ 1, 2024 ರಿಂದ 30 ನವೆಂಬರ್ 2024 ರವರೆಗೆ ಪಿಂಚಣಿದಾರರಿಗೆ "ರಾಷ್ಟ್ರವ್ಯಾಪಿ ಡಿಜಿಟಲ್ ಲೈಪ್ ಸರ್ಟಿಫಿಕೇಟ್ (ಡಿಎಲ್‍ಸಿ) ಅಭಿಯಾನ 3.0" ನಡೆಯಲಿದ್ದು ಇದರಲ್ಲಿ ಕರ್ನಾಟಕ ಅಂಚೆ ವೃತ್ತವು ನಾಗರಿಕರಿಗೆ ಜೀವನ ಪ್ರಮಾಣಪತ್ರ ಸೇವೆಯನ್ನು ಸಕ್ರಿಯವಾಗಿ ಒದಗಿಸಲಿದೆ.
ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆ ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಜೀವನ ಪ್ರಮಾಣಪತ್ರವನ್ನು ಸಲ್ಲಿಸಲು ವ್ಯವಸ್ಥೆ ಮಾಡಿದೆ.
ಪಿಂಚಣಿದಾರರು ತಮ್ಮ ಜೀವನ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೆÇೀಸ್ಟ್‍ಮ್ಯಾನ್ ಮೂಲಕ ಆಧಾರ್ ಸಂಖ್ಯೆ ಮೊಬೈಲ್ ಸಂಖ್ಯೆ ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಮುಖಚಹರೆ ಆಧಾರಿತ ಪ್ರಕ್ರಿಯೆ ಮುಖಾಂತರ ಸಲ್ಲಿಸಬಹುದು. ಈ ತಂತ್ರಜ್ಞಾನದ ಮೂಲಕ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ವಿಧಾನವು ಬಹಳ ಸುಲಭವಾಗಿದ್ದು, ಇದು ಹಿರಿಯ ಪಿಂಚಣಿದಾರರ ಬೆರಳಚ್ಚು ಗುರುತಿಸುವಲ್ಲಿನ ಹಾಗೂ ಇತರ ಬೆರಳಚ್ಚು ಸಂಬಂಧಿತ ದೃಢೀಕರಣದ ಸಮಸ್ಯೆಗಳನ್ನು ಎದುರಿಸುತ್ತಿರುವ ಗ್ರಾಹಕರಿಗೆ ಪ್ರಯೋಜನವನ್ನು ನೀಡುತ್ತದೆ.
ಕೇಂದ್ರ ಸರ್ಕಾರದ ನಿವೃತ್ತ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು, ಇಪಿಎಫ್‍ಓ ನ ಪಿಂಚಣಿದಾರರು ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಯ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ಈ ಸೇವೆಯನ್ನು ಪಡೆಯಬಹುದಾಗಿದೆ. ಮತ್ತು ರಾಜ್ಯ ಸರ್ಕಾರದ ಸಾಮಾಜಿಕ ಭದ್ರತಾ ಪಿಂಚಣಿದಾರರಿಗೆ ಅನ್ವಯವಾಗುವುದಿಲ್ಲ. ಈ ಸೇವೆಯನ್ನು ಪಡೆಯಲು ರೂ.70/- (ಜಿಎಸ್‍ಟಿ ಸೇರಿದಂತೆ) ಸೇವಾ ಶುಲ್ಕ ನಿಗದಿಪಡಿಸಲಾಗಿದೆ. ಪಿಂಚಣಿದಾರರು ಜೀವನ ಪ್ರಮಾಣಪತ್ರ ಸೇವೆಯನ್ನು ಪಡೆಯಲು ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
Publisher: eSamudaay