ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

25 Nov, 2024

ಉಡುಪಿ :ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ 2024-25ನೇ ಸಾಲಿನ ಪದವಿಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು ನಾಗಬನ ಕ್ಯಾಂಪಸ್‌ನ ವಿದ್ಯಾರ್ಥಿಗಳು ಭಾಗವಹಿಸಿದರು. ರಸಪ್ರಶ್ನೆಯಲ್ಲಿ ಅನಮಯ ಯೋಗಿಶ್ ದಿವಾಕರ್ ಮತ್ತು ತನಿಷ್ಕಾ ಕೆ ಶೆಟ್ಟಿ ಪ್ರಥಮ ಸ್ಥಾನ, ಜಾನಪದ ಗೀತೆಯಲ್ಲಿ ಸಮೃದ್ಧಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿಪ್ರಾ ಚಾತ್ರ ಇವರು ಭಕ್ತಿಗೀತೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಈ ಸಾಂಸ್ಕೃತಿಕ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಬೋಧಕ, ಬೋಧಕೇತಕ ವೃಂದದವರು ಅಭಿನಂದಿಸಿದ್ದಾರೆ.

Publisher: eSamudaay

Powered by