ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆಗೆ ಹಣ ಮಂಜೂರು ಮಾಡಲು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರಿಗೆ ಮನವಿ
26 Nov, 2024
ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಇಂದು ಕೇಂದ್ರದ ಕಾರ್ಮಿಕ ಹಾಗೂ ಉದ್ಯೋಗ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದರು.
ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಹಣವನ್ನು ಮಂಜೂರು ಮಾಡಲು ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ.
ಈ ಯೋಜನೆಯು ನುರಿತ ಮತ್ತು ಕೌಶಲ್ಯರಹಿತ ಯುವಕರಿಗೆ ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಯನ್ನು ಒದಗಿಸುವ ಗುರಿಯನ್ನು ಹೊಂದಿದೆ, ಇದರಿಂದಾಗಿ ವಿವಿಧ ಕೈಗಾರಿಕಾ ವಲಯಗಳಲ್ಲಿ ಅವರ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ.
ನಾನು ಎಂಎಸ್‍ಎಂಇ ಸಚಿವರಾಗಿದ್ದ ಅವಧಿಯಲ್ಲಿ ಈ ತಾಂತ್ರಿಕ ತರಬೇತಿ ಕೇಂದ್ರ (ಟಿಟಿಸಿ) ಮಂಜೂರಾಗಿದೆ. ಆದರೆ, ಹಣ ಬಿಡುಗಡೆಯಾಗದ ಕಾರಣ ಯೋಜನೆ ಇನ್ನೂ ಆರಂಭವಾಗಿಲ್ಲ. ಕೇಂದ್ರ ಸ್ಥಾಪನೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದರು.
ಈ ತರಬೇತಿ ಕೇಂದ್ರವು ವಾರ್ಷಿಕವಾಗಿ ಸರಿಸುಮಾರು 1,000 ವ್ಯಕ್ತಿಗಳಿಗೆ ತರಬೇತಿ ನೀಡುತ್ತದೆ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗಾವಕಾಶಗಳಿಗೆ ಪ್ರವೇಶವನ್ನು ಸುಧಾರಿಸುವ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ. ಈ ಕೇಂದ್ರದ ಸ್ಥಾಪನೆಯು ಈ ಪ್ರದೇಶದ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಈ ಯೋಜನೆಯ ಯಶಸ್ವಿ ಅನುμÁ್ಠನವನ್ನು ಸಕ್ರಿಯಗೊಳಿಸಲು ಅಗತ್ಯವಿರುವ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಮಾನ್ಯ ಸಚಿವರಲ್ಲಿ ವಿನಂತಿಸಿದರು. ಕರ್ನಾಟಕದ ಈ ಹಿಂದುಳಿದ ಪ್ರದೇಶದಲ್ಲಿ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ಉತ್ತೇಜಿಸಲು ಹೆಚ್ಚು ಕೊಡುಗೆ ನೀಡುತ್ತದೆ ಎಂದರು.
Publisher: eSamudaay