ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

26 Nov, 2024

ಕೋಟ : ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ ಜಿಲ್ಲೆಗಳಲ್ಲೆ ಹೊಸ ಭಾಷ್ಯ ಬರೆದಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್ , ಜೆಸಿಐ ಕೋಟ ಸಿನಿಯರ್ ಲಿಜನ್, ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಸಹಯೋಗದೊಂದಿಗೆ 231ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಕೋಟ ಮಣೂರು ಪಡುಕರೆ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತ್ಸ್ಯೋದ್ಯಮಿ ಸುರೇಶ್ ಕುಂದರ್, ಕೊಸ್ಟಲ್ ಕಾರ್ಡ್ ಸುದರ್ಶನ್ ಜಟ್ಟಿಗೇಶ್ವರ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಕೋಟ ಮುಂತಾದವರು ಉಪಸ್ಥಿತರಿದ್ದರು. ಪಂಚವರ್ಣದ ಸದಸ್ಯ ರವೀಂದ್ರ ಕೋಟ ಸ್ವಾಗತಿಸಿ ನಿರೂಪಿಸಿದರು.

Publisher: eSamudaay

Powered by