ಬೆಳಗಾವಿಯಲ್ಲಿ ನಡೆದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು

17 Dec, 2024

ಬೆಂಗಳೂರು :  ಪ್ರಥಮ ಬಾರಿಗೆ ಬೆಂಗಳೂರಿನಿಂದ ಹೊರಗೆ ಗಡಿ ಭಾಗ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿಸೆಂಬರ್ 16 ರಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಮೊಹಮದ್ ರೋಶನ್ ಹಾಗೂ ಸರ್ವಸದಸ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು 2010 ರಿಂದ ತನ್ನ ಅಧಿನಿಯಮದ ಅವಕಾಶದಂತೆ 19 ಗಡಿ ಜಿಲ್ಲೆ, 63 ಗಡಿ ತಾಲ್ಲೂಕುಗಳು 06 ಹೊರರಾಜ್ಯದ ಕನ್ನಡ ಭಾಷಿಕರ ಸ್ಥಳಗಳಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಾ ಬಂದಿದ್ದು, ಬೆಳಗಾವಿ ಗಡಿ ಜಿಲ್ಲೆಯಲ್ಲಿ ಲಭ್ಯವಿರುವ ಸೀಮಿತ ಅನುದಾನದಲ್ಲಿ 2010-11 ರಿಂದ 2023-24ನೇ ಸಾಲಿನವರೆಗೆ ರೂ.2125-71 ಲಕ್ಷಗಳ ಅನುದಾನವನ್ನು ವೆಚ್ಚಮಾಡಿ ಶಾಲಾ ಕೊಠಡಿ ನಿರ್ಮಾಣ, ಗ್ರಂಥಾಲಯ, ಬಯಲು ರಂಗ ಮಂದಿರ, ಸಾಂಸ್ಕøತಿಕ ಭವನ, ಶಾಲಾ ಆವರಣ ಗೋಡೆ ನಿರ್ಮಾಣ, ಶೌಚಾಲಯ ಇತರೆ ಅಭಿವೃದ್ಧಿ ಕಾರ್ಯಗಳ ಜೊತೆಗೆ ಕನ್ನಡ ಅಸ್ಮಿತೆಯನ್ನು ಕಾಪಾಡಲು ವಿವಿಧ ಸಂಘಟನೆಗಳ ಮೂಲಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.

ಮುಂದಿನ ವರ್ಷಗಳಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಅನಿವಾರ್ಯವಾಗಿ ತೆಗೆದುಕೊಳ್ಳಲೇಬೇಕಾದ ಕಾರ್ಯಕ್ರಮಗಳ ವಿವರವನ್ನು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು  ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publisher: eSamudaay

Powered by