ಬೆಂಗಳೂರಿಗೆ 2 ನೇ ವಿಮಾನ ನಿಲ್ದಾಣ: ವರದಿ ನೀಡಲು ಐಡೆಕ್ ಸಂಸ್ಥೆಗೆ ಜವಾಬ್ದಾರಿ: ಎಂ.ಬಿ.ಪಾಟೀಲ್

17 Dec, 2024

 ಬೆಳಗಾವಿ; ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್ ಸಂಸ್ಥೆಗೆ ವಹಿಸಲಾಗಿರುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಟಿ. ಎನ್. ಜವರಾಯಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

 ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಗುಡ್ಡಗಾಡು ಪ್ರದೇಶ, ಎತ್ತರದ ರಚನೆಗಳು.

 ಸಂಪರ್ಕ-ರಸ್ತೆ, ರೈಲು ಮತ್ತು ಮೆಟ್ರೋ ಸಂಪರ್ಕ.ಬಳಕೆದಾರರಿಗೆ ಉದ್ದೇಶಿತ ವಿಮಾನ ನಿಲ್ದಾಣವನ್ನು ತಲುಪುವ ದೂರ ಮತ್ತು ಸಮಯ, ವಿಸ್ತಾರವಾದ ಭೂಪ್ರದೇಶ, ಜಮೀನಿನ ಪ್ರಕಾರಗಳು, ಕಡಿಮೆ ಜನಸಾಂದ್ರತೆಯ ಪ್ರದೇಶ ಮತ್ತು ಜಲಸಂಪನ್ಮೂಲದ ಲಭ್ಯತೆ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸಂಭಾವ್ಯ ಸ್ಥಳಗಳ ಅಧ್ಯಯನವನ್ನು ನಡೆಸಲಾಗುತ್ತಿದೆ ಎಂದರು.

 ಅದರಂತೆ, ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿ / ಪ್ರಸ್ತಾವನೆಯನ್ನು ಸಿದ್ಧಪಡಿಸುವ ಕಾರ್ಯ ಪರಿಶೀಲನೆಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದರು.

 

Publisher: eSamudaay

Powered by