ಅಂಬಲಪಾಡಿ ಜಂಕ್ಷನ್ ಕಾಮಗಾರಿ ಆರಂಭ

19 Dec, 2024

ಉಡುಪಿ:  ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸಾಹು ತಿಳಿಸಿದ್ದಾರೆ.

 

ಉಡುಪಿ ಅಂಬಲಪಾಡಿಯ ವಸಂತ ಮಂಟಪದಲ್ಲಿ ಇಂದು‌ ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

1.2 ಕಿ.ಮೀ ಉದ್ದದ ಮೇಲ್ಸೇತುವೆ ಜತೆ ಅಂಡರ್ಪಾಸ್ ಕಾಮಗಾರಿ ನಡೆಯಲಿದೆ. 18 ತಿಂಗಳ ಪ್ರಾಜೆಕ್ಟ್ ಇದಾಗಿದ್ದು, 23.53 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ. 

ಕಾರ್ಲಾ ಕನ್ಟ್ರಕ್ಷನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸ್ಥಳೀಯರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಯೋಜನೆಯ ಮಾಹಿತಿ ಪಡೆದುಕೊಂಡರು. ಈ ನಡುವೆ ಶೀಘ್ರ ಕಾಮಗಾರಿ ಆರಂಭಿಸಲೇಬೇಕು ಎಂಬ ಒತ್ತಾಯ ಕೇಳಿಬಂತು. ಕೆಲವು ಉದ್ಯಮಿಗಳ ಒತ್ತಡಕ್ಕೆ ಮಣಿದು ಕಾಮಗಾರಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು. ಇದನ್ನು ಅಧಿಕಾರಿಗಳು ಅಲ್ಲಗಳೆದಿದ್ದಾರೆ.

ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಹಲವು ಸಮಯಗಳ ಬೇಡಿಕೆ ಇದಾಗಿದೆ. 39 ಕೋಟಿಯ ಕಾಮಗಾರಿಯನ್ನು 23 ಕೋಟಿಗೆ ತೆಗೆದುಕೊಂಡಿದ್ದಾರೆ. ಕಡಿಮೆ ಹಣಕ್ಕೆ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ ಎಂದು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ, ಗುಣಮಟ್ಟದಲ್ಲಿ ಕಾಮಗಾರಿ ಮಾಡಬೇಕು ಎಂದರು.

Publisher: eSamudaay

Powered by