ಬೆಂಗಳೂರು: ತೋಟಗಾರಿಕೆ ಇಲಾಖೆಯ ವತಿಯಿಂದ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಗಣರಾಜ್ಯೋತ್ಸವದ 217ನೇ ಫಲಪುಷ್ಪ ಪ್ರದರ್ಶನ -2025 ನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಾರಿಗೆ, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ತೋಟಗಾರಿಕಾ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ವಸತಿ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ. ಗರುಡಾಚಾರ್, ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ರೇಷ್ಮೆ ಮತ್ತು ತೋಟಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ತೋಟಗಾರಿಕಾ ನಿರ್ದೇಶಕರಾದ ರಮೇಶ್ ಡಿ.ಎಸ್. ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಲಾಲ್‍ಬಾಗ್‍ನಲ್ಲಿ ಹಮ್ಮಿಕೊಳ್ಳಲಾದ ಈ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ -2025 ಜನವರಿ 16 ರಿಂದ 27 ರವರೆಗೆ 12 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 6.30 ಗಂಟೆಯವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಯಸ್ಕರಿಗೆ ಸಾಮಾನ್ಯ ದಿನ ರೂ. 80/- ಹಾಗೂ ರಜಾ, ವಾರಾಂತ್ಯಗಳಲ್ಲಿ ರೂ. 100 ನಿಗಧಿಪಡಿಸಲಾಗಿದೆ.
12 ವರ್ಷದೊಳಗಿನ ಮಕ್ಕಳಿಗೆ ಎಲ್ಲಾ ದಿನ ರೂ. 30, ಸಮವಸ್ತ್ರ ಧರಿಸಿ ಬರುವ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಜಾ ದಿನ ಹೊರತುಪಡಿಸಿ ಉಚಿತ ಪ್ರವೇಶವಿರುತ್ತದೆ. ಮುಂಗಡ ಬುಕ್ಕಿಂಗ್‍ಗಾಗಿ ವೆಬ್‍ಸೈಟ್ https://hasiru.karnataka.gov.in/floweshow/login.aspx ಭೇಟಿ ನೀಡಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಬುಕ್ ಮಾಡಬಹುದಾಗಿದೆ.
Publisher: eSamudaay