ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

29 Jan, 2025

ಬೆಂಗಳೂರು  :

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ವರಿಕೆ ನೀಡಿದರು.

ದೇವದಾಸಿ ಪದ್ಧತಿ ನಿμÉೀಧ ಆಗಿದೆ. ಎಲ್ಲಿಯಾದರೂ ಈ ಪದ್ದತಿ ನಡೆದದ್ದು ಗಮನಕ್ಕೆ ಬಂದರೆ ಸಂಬಂಧಪಟ್ಟ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ಸಂಬಂಧಿಸಿದ ಅಧಿಕಾರಿಗಳ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಪೆÇಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ? ಎಡಿಜಿಪಿ ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಮುಖ್ಯಮಂತ್ರಿ ಅವರು ಈ ವಿಚಾರವನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು.

ಬ್ಯಾಕ್‍ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೆÇಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಪರಿಶೀಲನೆ ಸಭೆ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ ಮುಖ್ಯಮಂತ್ರಿಗಳು ಪ್ರತಿ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಸಿದರು.

ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಆಹೋರಾತ್ರಿ ಧರಣಿ ವಿಚಾರವನ್ನು ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪ್ರಸ್ತಾಪಿಸಿದರು.

ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಮುಖ್ಯಮಂತ್ರಿಗಳು ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರು.

ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸೂಚಿಸಿದರು.

ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸೂಚಿಸಲಾಯಿತು.

ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಸೂಚನೆ ನೀಡಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಶೇ. 3℅ ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು ಡಿಸಿಆರ್‍ಇ ಸೆಲ್ ಗಳಿಗೆ ಪೆÇಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ, ಕೌಂಟರ್ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದರು.

ಪರಿಶಿಷ್ಠರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ತನಿಖೆ ತಡ ಆದಷ್ಟೂ, ನ್ಯಾಯಾಲಯಗಳಲ್ಲಿ ವಿಚಾರಣೆ ತಡೆ ಆದಷ್ಟೂ ಸಾಕ್ಷಿ ನಾಶ ಆಗುತ್ತದೆ. ಈ ಪ್ರಕರಣಗಳಲ್ಲಿ Burden of proof ಆರೋಪಿಗಳ ಮೇಲಿರುತ್ತದೆ. ಆದ್ದರಿಂದ ಶಿಕ್ಷೆ ಪ್ರಮಾಣ ಹೆಚ್ಚಾಗಲೇ ಬೇಕು. ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಆರೋಪ ಪಟ್ಟಿ ಶೀರ್ಘವಾಗಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸೂಚಿಸಿದರು.

ಪೆÇೀಕ್ಸೋ ಪ್ರಕರಣಗಳು ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜೊತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀಘ್ರ ನ್ಯಾಯದಾನಕ್ಕೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.

ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು.

ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.

ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‍ಇ ಕೋಶವನ್ನು ಸ್ಥಾಪಿಸುವ ಕುರಿತು ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಸಹ ಪರಿಶೀಲನೆ ನಡೆಸಬೇಕು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಹಕಾರ ಸಚಿವ ರಾಜಣ್ಣ, ನಗರಾಭಿವೃದ್ಧಿ ಸಚಿವ ಸರೇಶ, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ನರೇಂದ್ರಸ್ವಾಮಿ, ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೆÇನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಶಾಸಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Publisher: eSamudaay

Powered by