ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ 2023 ಮತ್ತು 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆಬ್ರವರಿ 03 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರು ಮಲ್ಲೇಶ್ವರಂನ ಸಿ.ವಿ.ರಾಮನ್ ರಸ್ತೆಯ ಐ.ಐ.ಎಸ್.ಸಿ ಆವರಣದಲ್ಲಿರುವ ಜೆ. ಎನ್. ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭವನ್ನು ಉದ್ಘಾಟಿಸಿ ಪ್ರಶಸ್ತಿ ಪುರಸ್ಕøತರಿಗೆ ಪ್ರಶಸ್ತಿ ಪ್ರದಾನ ಮಾಡಲಿರುವರು. ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಸಿವಕುಮಾರ್ ಅವರು ಪ್ರಶಸ್ತಿ ಪುರಸ್ಕøತರ ಪರಿಚಯ ಪುಸ್ತಕ ಬಿಡುಗಡೆ ಮಾಡಲಿರುವರು.
ಸಮಾರಂಭಕ್ಕೆ ಮಾನ್ಯ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಹಾಗೂ ಕಾರ್ಮಿ, ಉದ್ಯೋಗ ಖಾತೆ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಅಧ್ಯಕ್ಷತೆಯನ್ನು ವಹಿಸಲಿರುವರು.
ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಮಾನ್ಯ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ ಬಿ.ಬಿ. ಕಾವೇರಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಅವರು ಆಶಯ ನುಡಿಗಳನ್ನಾಡಲಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿಗಳಾದ ಸಹನಾ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher: eSamudaay