ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ರಾಜ್ಯಪಾಲರಿಗೆ ಆಹ್ವಾನ

04 Feb, 2025

 

ಬೆಂಗಳೂರು  : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ಎಂ.ನಿಂಬಾಳ್ಕರ್ ಅವರು ಶುಕ್ರವಾರ ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಮಾರ್ಚ್ ತಿಂಗಳಲ್ಲಿ ನಡೆಯಲಿರುವ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಹಿಮಂತರಾಜು ಜಿ. ಉಪಸ್ಥಿತರಿದ್ದರು.

Publisher: eSamudaay

Powered by