ಬೆಂಗಳೂರು : ಜೈನ್ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ. ಜೈನ್ ಸಮಾಜವು ಆರ್ಥಿಕವಾಗಿ ಹಿಂದುಳಿದಿದ್ದು, ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಫ್, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ವಿಧಾನಸಭೆಯಲ್ಲಿ ಅಥಣಿ ವಿಧಾನಸಭಾ ಸದಸ್ಯರಾದ ಲಕ್ಷ್ಮಣ್ ಸಂಗಪ್ಪ ಸವದಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಈಗಾಗಲೇ ಜೈನ್ ಸಮುದಾಯದವರ ಕುರಿತು ಸರ್ವೆ ನಡೆಸಲಾಗಿದೆ. 20 ಲಕ್ಷಕ್ಕಿಂತ ಹೆಚ್ಚು ಜೈನ್ ಸಮುದಾಯದ ಜನಸಂಖ್ಯೆಯಿದ್ದು, ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಲಾಗಿದ್ದು ಈ ಕುರಿತು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದರು.
Publisher: eSamudaay