ಬೆಂಗಳೂರು : ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಮಂತ್ರಿಮಂಡಲ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ; ಅದರಲ್ಲೂ ಪಿಎಸ್ ಐ ನೇಮಕಾತಿ, ಉಪನ್ಯಾಸಕರ ನೇಮಕ, ಕೊರೋನಾ ಉಪಕರಣ ಖರೀದಿ, ಹೀಗೆ ಸಾಕಷ್ಟು ಹಗರಣಗಳು ನಡೆದಿದ್ದು, ಇವೆಲ್ಲದರ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಮಗ್ರ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಒಪ್ಪಿಸಿದ್ದಾರೆ. ವರದಿಯು ಸಚಿವ ಸಂಪುಟದ ಮುಂದೆ ಚರ್ಚೆ ಆಗಲಿದೆ. ಮುಖ್ಯಮಂತ್ರಿಯವರು ಮತ್ತು ಸಚಿವ ಸಂಪುಟ ಮುಂದೆ ನಿರ್ಧಾರ ಕೈಗೊಳ್ಳುತ್ತದೆ, ಅದರ ಮೇಲೆ ಕ್ರಮ ಆಗಲಿದೆ ಎಂದು ಸಚಿವರು ಹೇಳಿದರು.
Publisher: eSamudaay