ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

24 Mar, 2025

 

ಬೆಂಗಳೂರು, :ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ. ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ ಮೂರು ದಿನಗಳ ಕಮ್ಮಟವನ್ನು ಏಪ್ರಿಲ್ 21, 22 ಮತ್ತು 23 ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನಾಂಕವಾಗಿದೆ.  ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ ಸೈಟ್ http://karnatakasahithyaacademy.org ನಲ್ಲಿ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Publisher: eSamudaay

Powered by