ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಡಿಯಲ್ಲಿನ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ, ಶಿಕ್ಷಣ ಕ್ಷೇತ್ರದಲ್ಲೂ ಹಾಗೂ ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಅವುಗಳ ಪೈಕಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ವಿದೇಶ ವ್ಯಾಸಂಗಕ್ಕೆ ಸಹಾಯಧನ ಪ್ರಮುಖವಾದವುಗಳಾಗಿವೆ. ಈ ಕೆಳಗಿನ ಎಲ್ಲ ಕಾರ್ಯಕ್ರಮಗಳು / ಸೌಲಭ್ಯಗಳಿಗೆ ನೀವು ಅರ್ಹರಾಗಿದ್ದಲ್ಲಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದ್ದು, ಮಾರ್ಚ್ 29 ರವರೆಗೆ ಅವಕಾಶ ನೀಡಲಾಗಿದೆ.
ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
ಕರ್ನಾಟಕ ಸರ್ಕಾರವು ಶಿಕ್ಷಣದ ಗುಣಮಟ್ಟ ಕಾಪಾಡಲು, ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ. ಅವುಗಳ ಪೈಕಿ ಉಚಿತ ಲ್ಯಾಪ್‌ಟಾಪ್ ಯೋಜನೆಯು ಸಹ ಒಂದು. ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲಾಗುತ್ತದೆ.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪಾಸ್ ಮಾಡಿ ಅಥವಾ ಸಿಬಿಎಸ್‌ಇ ಬೋರ್ಡ್‌ನಿಂದ 12ನೇ ತರಗತಿ ಉತ್ತೀರ್ಣರಾಗಿ, ರಾಜ್ಯದ ಯಾವುದೇ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಥಮ ವರ್ಷದ ಸ್ನಾತಕ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.

ಯಾವ್ಯಾವ ಕೋರ್ಸ್ ಓದುವವರು ಉಚಿತ ಲ್ಯಾಪ್‌ಟಾಪ್'ಗಾಗಿ ಅರ್ಜಿ ಹಾಕಬಹುದು?
- ವೈದ್ಯಕೀಯ ಕೋರ್ಸ್‌ಗಳು
- ಬಿಇ ಪದವಿ ವ್ಯಾಸಂಗ ಮಾಡುತ್ತಿರುವವರು.
- ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಥಮ ವರ್ಷದ ಯಾವುದೇ ಪದವಿ ಓದುತ್ತಿರುವವರು.
- ಈ ಹಿಂದೆ ಉಚಿತ ಲ್ಯಾಪ್‌ಟಾಪ್ ಸೌಲಭ್ಯ ಪಡೆಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತು ತಮ್ಮ ಶಿಕ್ಷಣ ಸಂಸ್ಥೆಯ ಆಡಳಿತ ವಿಭಾಗದವರಲ್ಲಿ ಸಂಪರ್ಕಿಸಿ, ನಂತರ ಅರ್ಜಿ ಸಲ್ಲಿಸುವುದು.
ಅರ್ಹತೆಗಳು
ವಿದ್ಯಾರ್ಥಿ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಬಿಬಿಎಂಪಿ ವ್ಯಾಪ್ತಿಯ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಉಚಿತ ಲ್ಯಾಪ್‌ಟಾಪ್ ಸೌಲಭ್ಯಕ್ಕೆ ಅರ್ಜಿ ಹಾಕಲು ಬೇಕಾದ ದಾಖಲೆಗಳು
- ಬಿಬಿಎಂಪಿ ವ್ಯಾಪ್ತಿಯ ನಿರ್ದಿಷ್ಟ ಸ್ಥಳದಲ್ಲಿ ವಾಸಿಸುತ್ತಿರುವ ಬಗ್ಗೆ ವಸತಿ ಪ್ರಮಾಣ ಪತ್ರ.
- ಆಧಾರ್ ಕಾರ್ಡ್
- ಆಧಾರ್ ಲಿಂಕ್ ಮಾಡಿರುವ ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ.
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಇತ್ತೀಚಿಗೆ ತೆಗೆಸಿದ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
- ವಿದ್ಯಾರ್ಹತೆ ಪ್ರಮಾಣ ಪತ್ರ ( ಪಿಯುಸಿ ಅಂಕಪಟ್ಟಿ ಜೆರಾಕ್ಸ್).
- ಪದವಿಗೆ ಪ್ರವೇಶ ಪಡೆದಿರುವ ಕುರಿತು ದಾಖಲೆ.
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29-03-2025
ಹೆಚ್ಚಿನ ಮಾಹಿತಿಗಳಿಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್‌ಸೈಟ್ ವಿಳಾಸ https://bbmp.gov.in/ ಕ್ಕೆ ಭೇಟಿ ನೀಡಿ.
Publisher: eSamudaay